Top Newsರಾಜ್ಯ

ಕೋಮು ಪ್ರಚೋದನೆ – BJP ಶಾಸಕ ಹರೀಶ್ ಪೂಂಜಾ ವಿರುದ್ಧ FIR

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕೋಮು ಪ್ರಚೋದನಕಾರಿ ಭಾಷಣ, ಪೋಸ್ಟ್ ಹಾಕುವವರ ವಿರುದ್ಧ ಪೊಲೀಸರು ಪ್ರಕರಣದ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ.

ಇದೀಗ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡಿದ್ದ ಹರೀಶ್ ಪೂಂಜಾ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದರು.

ಇದನ್ನು ಆಧರಿಸಿ ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕೇಸ್ ದಾಖಲಾಗಿದ್ದವು

Comments (0)

Your email address will not be published. Required fields are marked *

Back to top button