ಓಬುಳಾಪುರಂ ಮೈನಿಂಗ್ ಪ್ರಕರಣದಲ್ಲಿ ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೀಗಾಗಿ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆಯ ಭೀತಿ ಎದುರಾಗಿದೆ.. ಈ ಸಂದರ್ಭದಲ್ಲಿ ಅವರ ಮುಂದೆ ಇರುವ ಆಯ್ಕೆಗಳು ಏನು ಎಂಬುದನ್ನು ನೋಡೋಣ
ಎರಡಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆಯ ತೀರ್ಪನ್ನು ಕೋರ್ಟ್ ನೀಡಿರುವ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನಕ್ಕೆ ಕುತ್ತು ಬರುವ ಎಲ್ಲಾ ಸಾಧ್ಯತೆಗಳು ಇವೆ. ಜನಪ್ರತಿನಿಧಿಗಳ ಕಾಯ್ದೆ ಅನ್ವಯ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರಲಿದೆ
ಸದ್ಯ ಸಿಬಿಐ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಜನಾರ್ದನ ರೆಡ್ಡಿಗೆ ಅವಕಾಶವಿದೆ. ಜನಾರ್ದನ ರೆಡ್ಡಿಗೆ ಹೈಕೋರ್ಟ್ ನಲ್ಲಿ ತಕ್ಷಣವೇ ರಿಲೀಫ್ ಸಿಗದಿದ್ರೆ ಅವರು ಶಾಸಕ ಸ್ಥಾನ ಕಳೆದುಕೊಳ್ಳಲಿದ್ದಾರೆ
2009ರಲ್ಲಿ ಓಎಂಸಿ ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲಿ ಜನಾರ್ದನ ರೆಡ್ಡಿಯನ್ನು ಸಿಬಿಐ ಅರೆಸ್ಟ್ ಮಾಡಿತ್ತು. ನಾಲ್ಕು ವರ್ಷ ಜನಾರ್ದನ ರೆಡ್ಡಿ ಹೈದರಾಬಾದ್ನ ಚೆರ್ಲಪಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದರು.
ಈಗಾಗಲೇ ಜನಾರ್ದನ ರೆಡ್ಡಿ ನಾಲ್ಕು ವರ್ಷ ಶಿಕ್ಷೆ ಅನುಭವಿಸಿರುವ ಹಿನ್ನೆಲೆಯಲ್ಲಿ ಅವರು ಇನ್ನು ಮೂರು ವರ್ಷ ಜೈಲಿನಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಈ ಬೆಳವಣಿಗೆ ಜನಾರ್ದನ ರೆಡ್ಡಿಯನ್ನು ಮತ್ತೆ ಪಕ್ಷಕ್ಕೆ ಬರಮಾಡಿಕೊಂಡಿದ್ದ ಬಿಜೆಪಿಗೆ ಭಾರೀ ಮುಜುಗರ ಉಂಟು ಮಾಡಿದೆ.