Top Newsಜನಸಾಮಾನ್ಯರ ದನಿರಾಜ್ಯ

HDK ಆರೋಗ್ಯದ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್

ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಅನಾರೋಗ್ಯದ ಬಗ್ಗೆ ಇದೇ ಮೊದಲ ಬಾರಿಗೆ ಜೆಡಿಎಸ್ ಯುವನಾಯಕ, ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಹಾರೈಕೆಯಿಂದ ಕುಮಾರಸ್ವಾಮಿ ಗುಣಮುಖರಾಗಿದ್ದಾರೆ.. ಇದೀಗ ಕುಮಾರಸ್ವಾಮಿಯವರು ಆರೋಗ್ಯವಾಗಿದ್ದಾರೆ.. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

1 ತಿಂಗಳಿಂದ ಎಲ್ಲೂ ಬಹಿರಂಗವಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ.ಸಾರ್ವಜನಿಕ, ಸರ್ಕಾರಿ ಕಾರ್ಯಕ್ರಮದಿಂದ ಕುಮಾರಸ್ವಾಮಿ ದೂರ ಇದ್ದರು. ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದು ವಾಪಸ್​ ಆಗಿದ್ದರು.

ಈ ಬಗ್ಗೆ ಕಳೆದ ಮೂರು ದಿನಗಳ ಹಿಂದೆ ಕೇಂದ್ರ ಸಚಿವ ಕುಮಾರಸ್ವಾಮಿ ಎಲ್ಲಿ ಎಂಬ ಶೀರ್ಷಿಕೆಯಡಿ ನಿಮ್ಮ ಫ್ರೀಡಂ ಟಿವಿ ಸುದ್ದಿ ಬಿತ್ತರ ಮಾಡಿತ್ತು. ಈ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಹೆಚ್​ ಡಿಕೆ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದರ ನಡುವೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ದೆಹಲಿ ಕಡೆ ಮುಖ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button