ಬೆಂಗಳೂರು : ಪಾರು ಸೀರಿಯಲ್ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ನಟ ಶ್ರೀಧರ್ ನಾಯಕ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾರೆ.
ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಅವರ ಪಾರ್ಥೀವ ಶರೀರವನ್ನು ಇಡಲಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಅಂತಿಮ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ.
ಪಾರು ಸೀರಿಯಲ್, ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದಲ್ಲಿ ನಟನೆ ಮಾಡಿದ್ದ ಶ್ರೀಧರ್ ನಾಯಕ್ ಆರೋಗ್ಯ ಇತ್ತೀಚೆಗೆ ಹದಗೆಟ್ಟಿದ್ದು, ಇತ್ತೀಚೆಗೆ ಶ್ರೀಧರ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ, ಅವರು ಸಹಾಯ ಕೋರಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗಲಿಲ್ಲ.