ಜಿಲ್ಲೆ

ಎನ್.ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್​ ದಾಖಲು..!

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಂಎಲ್ ಸಿ.ಎನ್.ರವಿಕುಮಾರ ವಿರುದ್ಧ ಜಾತಿ ನಿಂದನೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ಇಕ್ಕಳಕಿ .ದೂರುದಾರರ ಹೇಳಿಕೆಯನ್ನ ಆಧರಿಸಿ ಕಲಂ 197,224,299,302,351,353 ಅಡಿಯಲ್ಲಿ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಮ್ಮ ಸಮುದಾಯದ ಜನರ ಹೆದರಿಸಿ ಜಾತಿ ನಿಂದನೆ ಮಾಡಿದ್ದಾರೆ.ಅವಹೇಳನಕಾರಿಯಾಗಿ ಸಂಭೋದಿಸಿದ್ದಾರೆ.

ಕಲಬುರಗಿಯಲ್ಲಿ ನಡೆದ ಬಿಜೆಪಿಯ ಪ್ರತಿಭಟನೆಯಲ್ಲಿ ರವಿಕುಮಾರ್ ತಮ್ಮ ಭಾಷಣದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ.ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐಗಳಾದ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ಅವರು ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Comments (0)

Your email address will not be published. Required fields are marked *

Back to top button