Top Newsರಾಜ್ಯ

ಸೇನಾಧಿರಿಸಿನಲ್ಲಿ ಸಿಎಂ ಸಿದ್ದರಾಮಯ್ಯ ಆಕ್ಷನ್

ಸಿಎಂ ಸಿದ್ದರಾಮಯ್ಯ ಇಂದು ಬದಲಾಗಿದ್ರು. ಆಪರೇಷನ್ ಸಿಂಧೂರ್ ಪ್ರಭಾವವೋ ಏನೋ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ಸೇನಾ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.. ಮುಖ್ಯಮಂತ್ರಿಗಳ ಹಾವಭಾವ ಎಲ್ಲರ ಗಮನ ಸೆಳೆದಿದ್ದು ಸುಳ್ಳಲ್ಲ.

ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿಈ ದೃಶ್ಯ ಕಂಡುಬಂತು. ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ ನಿವೃತ್ತ ಯೋಧರ ಸಮೂಹವನ್ನು  ಮತ್ತು ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Comments (0)

Your email address will not be published. Required fields are marked *

Back to top button