Top Newsರಾಜಕೀಯ

ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿಸಿದ್ದೀರಿ ; ಹೆಚ್​ಡಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಪ್ರಕರಣಗಳನ್ನ ಉಲ್ಲೆಖಿಸಿ,ಸರ್ವಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದಿರಿ ಎಂದು ಸಿಎಂ ಸಿದ್ದರಾಮಯ್ಯರವರನ್ನ ಕಟುವಾಗಿ ಟೀಕಿಸಿದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ..

ಸಿದ್ದರಾಮಯ್ಯನವರೇ ನೀವು ಅಧಿಕಾರಕ್ಕೆ ಬಂದು 2 ವರ್ಷಗಳಾಯ್ತು. ಬೇರೆ ಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ.ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು..? ಎಂದು ಪ್ರಶ್ನಿಸಿದ ಕುಮಾರಸ್ವಾಮಿ.

ಒಂದು ಸಮುದಾಯ ನಿಮ್ಮ ಪಕ್ಷಕ್ಕೆ,ನೂರಕ್ಕೆ ನೂರರಷ್ಟು ಮತ ಕೊಟ್ಟಿದೆಯಲ್ಲವೇ..? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಮೇಲೆ ಕಿಡಿ ಕಾರಿದ ಕೇಂದ್ರ ಸಚಿವ ಕುಮಾರಸ್ವಾಮಿ.ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು.ಕೂಡಲೇ ಕರಾವಳಿಗೆ ಭೇಟಿ ನೀಡಿ ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ ಎಂದು ಸಿಎಂಗೆ ಸಲಹೆ ನೀಡಿದ ಕುಮಾರಸ್ವಾಮಿ…

Comments (0)

Your email address will not be published. Required fields are marked *

Back to top button