Top Newsಮನರಂಜನೆ

ಕಮಲ್ ವಿವಾದ.. ಮೌನ ಮುರಿದ ನಟ ಶಿವಣ್ಣ

ಕನ್ನಡ ಭಾಷೆ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಕೊನೆಗೂ ನಟ ಶಿವರಾಜ್‌ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್, ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನು ನಾನು ಸಮರ್ಥನೆ ಮಾಡಲ್ಲ ಎಂದಿದ್ದಾರೆ.

ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತನಾಡಿದ ವೇಳೆ ನಾನು ಎಲ್ಲರಂತೆ ಚಪ್ಪಾಳೆ ತಟ್ಟಿದ್ದು ನಿಜ. ಆದ್ರೆ, ಕಮಲ್ ಹಾಸನ್ ಆ ಸಂದರ್ಭದಲ್ಲಿ ಏನ್ ಹೇಳಿದ್ದಾರೆ ಅನ್ನೋದು ನನಗೆ ಗೊತ್ತಾಗಿರಲಿಲ್ಲ. ನಾನು ಎರಡನೇ ಬಾರಿ ಕ್ಲಿಪ್ಪಿಂಗ್ ಕೇಳಿದಾಗಲೇ ಗೊತ್ತಾಗಿದ್ದು ಎಂದು ನಟ ಶಿವಣ್ಣ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಅಭಿಮಾನದ ಬಗ್ಗೆ ಎಲ್ಲರೂ ಮಾತಾಡ್ತಿದ್ದಾರೆ. ಕನ್ನಡ ಅಭಿಮಾನ ಏನು ಅನ್ನೋದು ನಮಗೂ ಗೊತ್ತಿದೆ. ನಾನು ಕೂಡ ಕನ್ನಡ ಅಭಿಮಾನಿ. ಅಣ್ಣಾವ್ರ ಕನ್ನಡ ಅಭಿಮಾನ ನಿಮಗೆಲ್ಲರಿಗೂ ಗೊತ್ತೇ ಇದೆ ಎಂದು ನಟ ಶಿವಣ್ಣ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button