ಜಿಲ್ಲೆ

ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ 6 ಜನರಿಂದ ಅತ್ಯಾಚಾರ..!

ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ , ಆಕೆಯನ್ನು ಪದೇ ಪದೇ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ. 15 ವರ್ಷದ ಬಾಲಕಿ ಮೇಲೆ 6 ಜನ ದುಷ್ಕರ್ಮಿಗಳಿಂದ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಇತರ ನಾಲ್ವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ.ವಿಡಿಯೋ ಇಟ್ಟುಕೊಂಡು ದುಷ್ಕರ್ಮಿಗಳು ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದು, ಸಂತ್ರಸ್ತೆ ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಆರು ತಿಂಗಳ ಹಿಂದೆ 15 ವರ್ಷದ ಬಾಲಕಿಯನ್ನು ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ.ತನ್ನ ಪ್ರಿಯಕರ ತನ್ನನ್ನು ಆಮಿಷವೊಡ್ಡಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದಿದ್ದಾಗಿ ಬಾಲಕಿ ಆರೋಪಿಸಿದ್ದಾರೆ.

Comments (0)

Your email address will not be published. Required fields are marked *

Back to top button