Top Newsಮನರಂಜನೆ

ಥಗ್ ಲೈಫ್​ ಗೆ ಕಂಟಕ ಭೀತಿ.. ಹೈಕೋರ್ಟ್ ಗೆ ಮೊರೆ

ಅಭಿಜಾತ ಕಲಾವಿದ, ಬಹುಭಾಷಾ ನಟ ಕಮಲ್‌ ಹಾಸನ್‌ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದಾಗಿ ಅವರ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗ್ತಿದೆ..

ಈ ಹಿನ್ನೆಲೆಯಲ್ಲಿ ಥಗ್ ಲೈಫ್ ಚಿತ್ರ ನಿರ್ಮಾಣ ಮಾಡಿರುವ ಸಂಸ್ಥೆ ರಾಜ್‌ಕಮಲ್‌ ಫಿಲ್ಮ್ಸ್‌ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದೆ.

ಥಗ್‌ ಲೈಫ್‌ ಸಿನಿಮಾ ಹಂಚಿಕೆ ಮತ್ತು ಬಿಡುಗಡೆಗೆ ಅಗತ್ಯ ಬಂದೋಬಸ್ತ್‌ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಂಸ್ಥೆಯ ಸಿಇಓ ನಾರಾಯಣ್‌ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ವಾಣಿಜ್ಯ ಮಂಡಳಿಗೆ ಥಗ್‌ ಲೈಫ್‌ ನಿಷೇಧಿಸಲು ಯಾವುದೇ ಹಕ್ಕು ಇಲ್ಲ. ಬಿಡುಗಡೆಗೆ ನಿಷೇಧ ಹೇರುವುದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಲಿದೆ. ಸಿನಿಮಾ ಪ್ರದರ್ಶಿಸುವ ಮತ್ತು ಅದನ್ನು ವೀಕ್ಷಿಸುವ ಜನರ ಹಕ್ಕಿಗೆ ಹಾನಿಯಾಗುತ್ತದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಥಗ್ ಲೈಫ್ ಚಿತ್ರ ನಿರ್ಮಾಣ ಮಾಡಿರುವ ಸಂಸ್ಥೆ ರಾಜ್‌ಕಮಲ್‌ ಫಿಲ್ಮ್ಸ್‌ ಸಲ್ಲಿಸಿರುವ ಈ ಅರ್ಜಿ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.

ಚೆನ್ನೈನಲ್ಲಿ ಥಗ್‌ ಲೈಫ್‌ ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ ಕಮಲ್‌ ಹಾಸನ್‌, ಕನ್ನಡವು ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಹೇಳಿಕೆ ನೀಡಿದ್ರು.

ಇದಕ್ಕೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಆಗಲು ಬಿಡಲ್ಲ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದರು

 

 

Comments (0)

Your email address will not be published. Required fields are marked *

Back to top button