Top News

ಬೆಂಗಳೂರು ಪೊಲೀಸ್ ಕಮೀಷನರ್ ಅಮಾನತು

ಆರ್ ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರ ಅತ್ಯಂತ ಕಠಿಣಾತಿಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿ ಅಪರೂಪದಲ್ಲೇ ಅತ್ಯಂತ ಅಪರೂಪದ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿದ್ದಾರೆ.

ಪೊಲೀಸ್ ಕಮೀಷನರ್ ದಯಾನಂದ್ ಅವರನ್ನು ಮಾತ್ರವಲ್ಲದೇ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಕೇಂದ್ರ ವಲಯ ಡಿಸಿಪಿ ಟಿ ಶೇಖರ್, ಕಬ್ಬನ್ ಪಾರ್ಕ್ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಗಿರೀಶ್ ಮತ್ತು ಸಿಬ್ಬಂದಿಯನ್ನು ಸಿಎಂ ಸಿದ್ದರಾಮಯ್ಯ ಅಮಾನತು ಮಾಡಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.

ಈ ಅಮಾನತು ಆದೇಶ ಸಂಚಲನ ಮೂಡಿಸಿದೆ. ಸಂಜೆ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ.

Comments (0)

Your email address will not be published. Required fields are marked *

Back to top button