Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop News56 ಇಂಚಿನ ಎದೆ useless - ಮೋದಿ ವಿರುದ್ಧ ಸಿಎಂ ವಾಗ್ದಾಳಿ

56 ಇಂಚಿನ ಎದೆ useless – ಮೋದಿ ವಿರುದ್ಧ ಸಿಎಂ ವಾಗ್ದಾಳಿ

56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂದು ಪ್ರಧಾನಿ ನರೇಂದ್ಯರ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

56 ಇಂಚಿನ ಎದೆಯ ಪ್ರಧಾನಿ ಮೋದಿಯವರು useless ಆಗಿದ್ದಾರೆ.‌ ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ 1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸಿಎಂ ಸವಾಲು ಹಾಕಿದರು.

ಅಶೋಕ್- ವಿಜಯೇಂದ್ರ ಸಾರ್ವಜನಿಕ‌ ಚರ್ಚಗೆ ಬನ್ನಿ

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments