Monday, June 23, 2025
25.2 C
Bengaluru
Google search engine
LIVE
ಮನೆ#Exclusive NewsTop Newsಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ - ಸಚಿವೆ ಹೆಬ್ಬಾಳ್ಕರ್ ಆಕ್ರೋಶ

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ – ಸಚಿವೆ ಹೆಬ್ಬಾಳ್ಕರ್ ಆಕ್ರೋಶ

ಚಕ್ರವರ್ತಿ ಸೂಲಿಬೆಲೆ ಒಬ್ಬ ಸುಳ್ಳಿನ ಚಕ್ರವರ್ತಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಹೇಳುತ್ತಾರೆ. ಆದರೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು ಎಂದರು.

ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ನಿಸ್ಸೀಮರು. ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ಕೊಟ್ಟಿದೆ. ಇಡೀ ದೇಶದ ಇತಿಹಾಸದಲ್ಲಿ ಸಂವಿಧಾನವನ್ನು ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡ್ರು.

ನಾವು ಚಕ್ರವರ್ತಿ ಸೂಲಿಬೆಲೆ ಅವರಿಂದ ಪಾಠ ಕೇಳಬೇಕಾಗಿಲ್ಲ. ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಸೂಲಿಬೆಲೆ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಸೂಲಿಬೆಲೆ ತಮ್ಮ ಪ್ರವಾಸ ಮಾಡಬಹುದು. ದ್ವೇಷದ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ. ಯಾಕೆಂದರೆ ಉಡುಪಿ ಶಾಂತಿ ಪ್ರಿಯರ ಜಿಲ್ಲೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಒಂದು ಕಡೆ ಬಿಜೆಪಿ ಕೋಮುವಾದವನ್ನು ಪ್ರಚೋದನೆ ಮಾಡುತ್ತದೆ. ನಾವು ಕೋಮು ಪ್ರಚೋದನೆ ಮಾಡುತ್ತಿಲ್ಲ ಎನ್ನುತ್ತಾರೆ. ಇನ್ನೊಂದು ಕಡೆ ಕೋಮು ನಿಗ್ರಹದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ.‌ ಇಂಥ ಮನೋಭಾವನೆಯ ಬಿಜೆಪಿ ಶಾಸಕರನ್ನು ನೋಡಿದರೆ ಅವರ ಮನಸ್ಥಿತಿ ಏನು ಅನ್ನೋದು ಉಡುಪಿಯ ಜನತೆಗೆ ಅರ್ಥವಾಗುತ್ತೆ ಎಂದು ಸಚಿವರು ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಕಿಡಿ ಕಾರಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments