ರಾಜ್ಯ

ತಿರುಪತಿಗೆ ಕರ್ನಾಟಕದಿಂದ ಹೊಸ ರೈಲು – ಗುಡ್​ ನ್ಯೂಸ್ ಕೊಟ್ಟ ಸೋಮಣ್ಣ

ತಿರುಮಲದ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ಕೇಂದ್ರ ಸರ್ಕಾರ ಗುಡ್​ ನ್ಯೂಸ್ ಕೊಟ್ಟಿದೆ. ಕರ್ನಾಟಕದಿಂದ ತಿರುಪತಿಗೆ ಹೊಸ ರೈಲೊಂದು ಇನ್ಮುಂದೆ ಸಂಚರಿಸಲಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಇದು ಮಲೆನಾಡು, ತುಮಕೂರು, ಬೆಂಗಳೂರು ಮತ್ತು ಕೋಲಾರದ ಭಕ್ತರಿಗೆ ಇದು ಅನುಕೂಲವಾಗಲಿದೆ.

ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆ ಈ ವಾರದ ರೈಲಿನ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

https://x.com/VSOMANNA_BJP/status/1938841431210115245

ತಿರುಪತಿ ರೈಲು ವೇಳಾಪಟ್ಟಿ

ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.

ತಿರುಪತಿ-ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು, ಮರುದಿನ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.

ನಿಲ್ದಾಣಗಳು
ತಿರುಪತಿ, ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ, ಚಿಕ್ಕಮಗಳೂರು.

Comments (0)

Your email address will not be published. Required fields are marked *

Back to top button