ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಮಂದಿಯನ್ನು ಖುಲಾಸೆಗೊಳಿಸಿದೆ.
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ನಲ್ಲಿ 2008ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ NIA ವಿಶೇಷ ಕೋರ್ಟ್ ತೀರ್ಪು ನೀಡಿದೆ. ಕೇವಲ ಅನುಮಾನ ಮಾತ್ರವಿದ್ದರೆ ಸಾಲದು ಸಾಕ್ಷ್ಯಗಳನ್ನು ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಹೆಸರು ಇತ್ತು. ಇದೀಗ ಎಲ್ಲಾ ಆರೋಪಿಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


