Top News

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಅಮಾನತಾದ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಿದ್ದ ರಾಜ್ಯ ಸರ್ಕಾರ ನಾಲ್ವರ ಅಮಾನತು ಆದೇಶವನ್ನು ವಾಪಸ್​ ಪಡೆದುಕೊಂಡಿತ್ತು. ಇದೀಗ ಈ ಬೆನ್ನಲ್ಲೇ ಅಮಾನತು ರದ್ದಾದ ಐಪಿಎಸ್​ ಅಧಿಕಾರಿಗಳಿಗೆ ಸ್ಥಳ ನಿಗದಿ ಮಾಡಿ ಮರು ನೇಮಕ ಮಾಡಿಕೊಂಡಿದೆ.

ಈ ಹಿಂದೆ ಬೆಂಗಳೂರಿನ ಪೊಲೀಸ್​ ಆಯುಕ್ತರಾಗಿದ್ದ ಬಿ.ದಯಾನಂದ್ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಇನ್ನೋರ್ವ ಕೇಂದ್ರ ವಿಭಾಗದ ಡಿಸಿಪಿ ಆಗಿದ್ದ ಶೇಖರ್ ಹೆಚ್.ಟಿ. ಅವರಿಗೆ ಗುಪ್ತಚರ ಇಲಾಖೆಯ ಎಸ್​​ಪಿ ಹುದ್ದೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು 11 ಮಂದಿ ಅಮಾಯಕರು ಜೀವ ಕಳೆದುಕೊಂಡಿದ್ದರು. ಈ ಕಾಲ್ತುಳಿತ ದುರಂತಕ್ಕೆ ಪೊಲೀಸ್​ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ವರದಿಯಾಗಿತ್ತು. ಹೀಗಾಗಿ ಸರ್ಕಾರ ಬೆಂಗಳೂರಿನ ಪೊಲೀಸ್​ ಆಯುಕ್ತರಾಗಿದ್ದ ಬಿ.ದಯಾನಂದ್, ಕೇಂದ್ರ ವಿಭಾಗದ ಡಿಸಿಪಿ ಆಗಿದ್ದ ಶೇಖರ್ ಹೆಚ್.ಟಿ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಅಧಿಕಾರಿಗಳನ್ನು ಮರು ನೇಮಕ ಮಾಡಿಕೊಂಡಿದೆ.

Comments (0)

Your email address will not be published. Required fields are marked *

Back to top button