ಸಿನಿಮಾ

ಆತ್ಮಹತ್ಯೆಗೆ ಶರಣಾದ ಕಾಮಿಡಿ ಕಿಲಾಡಿ ಶೋ ಖ್ಯಾತಿಯ ಚಂದ್ರಶೇಖರ್‌

ಕನ್ನಡದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಖ್ಯಾತಿ ಪಡೆದಿದ್ದ ಚಂದ್ರಶೇಖರ್‌ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡು  ಜನರನ್ನು ರಂಜಿಸಿ ಗಮನ ಸೆಳೆದಿದ್ದರು.

ಯಲ್ಲಾಪುರ ತಾಲೂಕಿನ ತೆಲಂಗಾರ ವಜ್ರಳ್ಳಿಯ ನಿವಾಸಿಯಾದ ಚಂದ್ರಶೇಖರ್ (31), ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು. ಶನಿವಾರ ಮಧ್ಯಾಹ್ನ 2 ಗಂಟೆಗೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ. ಆತನ ಪತ್ನಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಚಂದ್ರಶೇಖರ್ ತಾಯಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Comments (0)

Your email address will not be published. Required fields are marked *

Back to top button