ಅಸ್ಸಾಂ: ಪಿವಿಆರ್ ಸಿನಿಮಾ ಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ಮೇಲ್ಛಾವಣಿಯ ಒಂದು ಭಾಗ ಕುಸಿದು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.
ಮಹಾವತಾರ ನರಸಿಂಹ ಚಿತ್ರದ ಪ್ರದರ್ಶನದ ವೇಳೆ ಈ ಘಟನೆ ಸಂಭವಿಸಿದ್ದು, ಮೇಲಿನ ಕಟ್ಟಡದ ಒಂದು ಭಾಗ ಹಠಾತ್ತನೆ ಬಿದ್ದು, ಅವಶೇಷಗಳು ಎಲ್ಲೆಡೆ ಹರಡಿಕೊಂಡಿವೆ. ಇದರಿಂದ ಚಿತ್ರಮಂದಿರದಲ್ಲಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಗಾಯಗೊಂಡವರಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಚಿತ್ರಮಂದಿಕ್ಕೆ ಭೇಟಿ ನೀಡಿ ಮಚ್ಚಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ ಮಾಲ್ ನಿರ್ವಹಣೆ ಮತ್ತು ಪಿವಿಆರ್ ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ


