ರಾಜ್ಯಸುದ್ದಿ

ಮೈಸೂರಿನಲ್ಲಿ ಮುಂದುವರೆದ ಕಾಡಾನೆ ದಾಳಿ ಮಹಿಳೆಗೆ ಗಾಯ

ಮೈಸೂರು ; ಜಮೀನಿಗೆ ಹೋಗುತ್ತಿದ್ದ ರೈತ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೀನಾಕ್ಷಿ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿದೆ. ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಆನೆ ದಾಳಿ ಮಾಡುತ್ತಿದ್ದಂತೆ, ಸ್ಥಳದಲ್ಲೇ ಇದ್ದ ಮೀನಾಕ್ಷಿ ಪತಿ ಜೋರಾಗಿ ಕೂಗಿಕೊಂಡಿದ್ದಾರೆ. ಧ್ವನಿ ಕೇಳುತ್ತಿದ್ದಂತೆ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಜನರು ಬರುತ್ತಿದ್ದಂತೆ ಆನೆ ಓಡಿ ಹೋಗಿದೆ. ಬಳಿಕ ಸಾರ್ವಜನಿಕರು ಗಾಯಾಳು ಮೀನಾಕ್ಷಿ ಅವನರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀನಾಕ್ಷಿ ಎಂಬ ರೈತ ಮಹಿಳೆ ಜಿಲ್ಲೆಯ ಜನ ಕಾಡಾನೆ ದಾಳಿಯಿಂದ ರೋಸಿ ಹೋಗಿದ್ದಾರೆ. ಮೇಲಿಂದ ಮೇಲೆ ಕಾಡಾನೆಗಳು ದಾಳಿ ಮಾಡುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹುಣಸೂರು ತಾಲೂಕಿನಲ್ಲಿ ಕಾಡಾನೆ ಹಾವಳಿಯಿಂದ ಜನರು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ. ಕಳೆದ ವರ್ಷ ನವೆಂಬರ್​ ತಿಂಗಳಿನಲ್ಲಿ ಇದೇ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನ ವನದಂಚಿನ ಬಿಲ್ಲೇನಹೊಸಹಳ್ಳಿ ಗ್ರಾಮದ ಚಿನ್ನದೊರೆ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ರಾಗಿ, ಮುಸುಕಿನಜೋಳ, ಮರಗೆಣಸು ಬೆಳೆ ನಾಶವಾಗಿತ್ತು.

ರೈತ ವೆಂಕಟೇಶ್​​​ಗೆ ಸೇರಿದ ಬೆಳೆ ನಾಶವಾಗಿತ್ತು. ಕಾಡಾನೆಗಳು ಬೆಳೆಯನ್ನು ತಿಂದು, ತುಳಿದು ನಾಶ ಮಾಡಿತ್ತು. ಜೊತೆಗೆ ವಾಸದ ಮನೆ ಮೇಲೂ ದಾಳಿ ಮಾಡಿದೆ. ಮನೆ ಅಂಗಳದಲ್ಲಿ ಡ್ರಮ್ ನಲ್ಲಿ ತುಂಬಿಸಿಟ್ಟಿದ್ದ ನೀರು ಕುಡಿತ್ತು.

ಆನೆ ಹಾವಳಿಯಿಂದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಕಾಡಾನೆಗಳು ಕೂಟದ ಕಡ ಹಾಗೂ ತಟ್ಟೆ ಹಳ್ಳ ಪಾರೆ ಭಾಗದಿಂದ ಬಂದಿವೆ ಎನ್ನಲಾಗಿದೆ. ರೈಲ್ವೆ ಬ್ಯಾರಿಕೇಡ್ ಬೇಲಿ ದಾಟಿ ಗಜಪಡೆ ಬಂದು ದಾಂಧಲೆ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Comments (0)

Your email address will not be published. Required fields are marked *

Back to top button