Wednesday, January 28, 2026
17 C
Bengaluru
Google search engine
LIVE
ಮನೆ#Exclusive NewsTop Newsಸಂಸದ ಡಾ.ಕೆ. ಸುಧಾಕರ್​ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

ಸಂಸದ ಡಾ.ಕೆ. ಸುಧಾಕರ್​ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯವರ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಲ್ಕು ಪುಟಗಳ ಡೆತ್ ನೋಟಲ್ಲಿ ಅವರು ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್, ಮತ್ತು ಅವರ ಬೆಂಬಲಿಗರಾದ ನಾಗೇಶ್, ಮಂಜುನಾಥ್ ಹೆಸರು ಬರೆದಿದ್ದರಂತೆ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments