ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.
ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ ವಾರ್ಡ್ನ ಪಾಲಿಕೆ ಸದಸ್ಯೆ ಆಗಿರುವ ವರ್ಷಾ ಜಾನೆ ಹಾಗೂ ಉಪಮೇಯರ್ ಆಗಿ 45ನೇ ವಾರ್ಡ್ನ ಪಾಲಿಕೆ ಸದಸ್ಯೆ ತೃಪ್ತಿ ಲಾಖೆ ನೇಮಕರಾಗಿದ್ದಾರೆ.
36 ಮತಗಳನ್ನ ಪಡೆದು ವರ್ಷಾ ಜಾನೆ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. 33 ಮತಗಳನ್ನು ಪಡೆದಿರುವ ತೃಪ್ತಿ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯೆ ಗಂಗಮ್ಮ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ 27 ಮತ ಪಡೆದು ಗಮನ ಸೆಳೆದಿದ್ದಾರೆ. ಮ್ಯಾಜಿಕ್ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಹುದೊಡ್ಡ ಮುಜುಗರ ಉಂಟಾಗಿದೆ.


