ಚಾಮರಾಜನಗರ: ಫೋಟೋ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಕಾಡಾನೆಯೊಂದು ತನ್ನ ಮರಿಯೊಂದಿಗೆ ರಸ್ತೆ ಮಧ್ಯದಲ್ಲಿ ನಿಂತಿದ್ದು, ಈ ವೇಳೆ ಕಾರಿನಿಂದ ಇಳಿದು ಹುಚ್ಚಾಟ ಮೆರೆದಿದ್ದಾರೆ. ಇದರಿಂದ ಗಾಬರಿಗೊಂಡ ಕಾಡಾನೆ ಫೋಟೋ ತೆಗೆಯಲು ಹೋಗಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದೆ.
ಈ ವೇಳೆ ಓಡಿ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದು ಆನೆ ದಾಳಿ ಮಾಡಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


