#Exclusive NewsTop News

ನಟ ದರ್ಶನ್​, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಜಾ

ದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ಪವಿತ್ರಾಗೌಡ ಸೇರಿದಂತೆ 7 ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್​ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

A1 ಪವಿತ್ರಾ ಗೌಡ, A2 ದರ್ಶನ್ ಸೇರಿ ಎಲ್ಲರ ಜಾಮೀನು ರದ್ದುಗೊಳಿಸಿದೆ. ಈ ಮೂಲಕ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರಿಂಕೋರ್ಟ್ ಅಭಿಪ್ರಾಯ ಪಟ್ಟಿದೆ. ಆರೋಪಿಗಳು ಎಷ್ಟೇ ದೊಡ್ಡವರಾದರು ಕಾನೂನಿನ ಮುಂದೆ ಯಾರೂ ಕೂಡಾ ದೊಡ್ಡವರಲ್ಲ ಯಾರು ಕೂಡಾ ಚಿಕ್ಕವರಲ್ಲ. ಆರೋಪಿಗಳಿಗೆ ಜೈಲಿನಲ್ಲಿ ಫವ್​ ಸ್ಟಾರ್​​ ಟ್ರೀಟ್ಮೆಂಟ್ ನೀಡಲಾಗಿದೆ. ದರ್ಶನ್​ ರಾಜಾತಿಥ್ಯ ಕೊಟ್ಟ ಜೈಲಾಧಿಕಾರಿ ಅಮಾನತಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಅಷ್ಟೇ ಅಲ್ಲದೇ ಈ ಕೂಡಲೇ ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡುವಂತೆ ಆದೇಶ ಮಾಡಿದೆ.

Comments (0)

Your email address will not be published. Required fields are marked *

Back to top button