ಹೊಸಪೇಟೆ: ತುಂಗಭದ್ರಾ ಜಲಾನಯದ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, 3.20 ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗಿದೆ.
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಈ ವರ್ಷದ ಮೂರು ಬಾರಿ ಕಂಪ್ಲಿ ಮತ್ತು ಗಂಗಾವತಿ ಸೇತುವೆ, ಹಂಪಿಯ ಕೆಲವು ಸ್ಮಾರಕಗಳು ಸೇರಿ 7 ಸ್ಮಾರಕಗಳು ಮುಳುಗಡೆಯಾಗಿವೆ.
ಅಣೆಕಟ್ಟಿನಲ್ಲಿ 80 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹಿಸಬಾರದು ಎಂದು ಸೂಚಿಸಿದ್ದು, ಅಣೆಕಟ್ಟಿನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ನದಿಗೆ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.