ಕಲಬುರಗಿ: ಕಲಬುರಗಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಕುಖ್ಯಾತ ಬೈಕ್ ಕಳ್ಳನನ್ನ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಗುಲಾಮ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ರಾಘವೇಂದ್ರ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ವಿವಿಧ ಕಂಪನಿಗೆ ಸೇರಿದ 2,70,000 ಮೌಲ್ಯದ ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಂಧಿಸಿದ ಠಾಣೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.