Top Newsಜಿಲ್ಲೆ

ಬಿ.ಎಲ್​ ಸಂತೋಷ್​ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ತಿಮರೋಡಿಗೆ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ವಿರುದ್ಧ ಅವಹೇಳನಕಾರಿ ಆರೋಪದ ಮೇಲೆ ಬಂಧಿತರಾಗಿದ್ದ ಮಹೇಶ್​ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ನೀಡಲಾಗಿದೆ. ಬ್ರಹ್ಮಾವರ ತಾಲೂಕು ಸಂಚಾರಿ ಪೀಠ ಜಾಮೀನು ಮಂಜೂರು ಮಾಡಿದೆ.

ಮಹೇಶ್​ ಶೆಟ್ಟಿ ತಿಮರೋಡಿ ಸಲ್ಲಿಸಿದ  ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಡುಪಿ ಹೆಚ್ಚುವರಿ ಸಿವಿಲ್​ ನ್ಯಾಯಾಲಯದ ನ್ಯಾಯಾಧೀಶ ಎನ್.ಎ ನಾಗೇಶ್ ಜಾಮೀನು ನೀಡಿದ್ದಾರೆ. ಇನ್ಮುಂದೆ ಈ ತರಹದ ನ್ಯೂಸೆನ್ಸ್​ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.

ಮಹೇಶ್​ ಶೆಟ್ಟಿ ತಿಮರೋಡಿ ಪರ ವಕೀಲರು ವಾಡ ಮಂಡಿಸಿದದ್ದು, ಬಂಧನ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ, ಪ್ರಥಮ ನೋಟಿಸ್​ ನೀಡಿದ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್​ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮುಗಲಭೆ ಆಗಿಲ್ಲ. ತಿಮರೋಡಿ ಕೂಡ ಒಬ್ಬ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೋಷಿಸಿಲ್ಲ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button