Thursday, November 20, 2025
27.5 C
Bengaluru
Google search engine
LIVE
ಮನೆ#Exclusive NewsTop Newsಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ; ಶಿಡ್ಲಘಟ್ಟದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ

ಶಿಡ್ಲಘಟ್ಟ: ಧರ್ಮಸ್ಥಳ ಷಡ್ಯಂತ್ರ ವಿರುದ್ಧ ಶಿಡ್ಲಘಟ್ಟದಲ್ಲಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಗರದ KSRTC ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿ ಬಳಿಕ ತಹಶೀಲ್ದಾರ್​ ಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಗತಿಪರ ಸಂಘಟನೆಗಳು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆ ಮತ್ತು ಪ್ರಗತಿ ವಿರುದ್ದ ನಡೆದ ಷಡ್ಯಂತ್ರದ ವಿರುದ್ದ ಧ್ವನಿ ಎತ್ತದಿದ್ದರೆ ಮುಂದೊಂದು ದಿನ ನಾವು ಅದರ ಪ್ರಾಯಶ್ಚಿತ ಪಡುವ ಹಾಗೂ ಹಿಂದೂ ರಾಷ್ಟ್ರದಲ್ಲಿ ಹಿಂದೂಗಳೆ ಪರಕೀಯರಂತೆ ಭಯದಿಂದ ಬದುಕುವ ದಿನಗಳು ದೂರವೇನಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ರು.

ಧರ್ಮಸ್ಥಳದ ಮಂಜುನಾಥಸ್ವಾಮಿ ದೇಗುಲದ ಪಾವಿತ್ರ್ಯತೆ ವಿರುದ್ದ ನಡೆದಿರುವ ಷಡ್ಯಂತ್ರದ ತನಿಖೆಯನ್ನು ಎನ್‍ಐಎಗೆ ವಹಿಸಬೇಕು, ಷಡ್ಯಂತ್ರ ನಡೆಸಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಧರ್ಮಸ್ಥಳದ ಬಗ್ಗೆ ಭಕ್ತರಲ್ಲಿ ಮೂಡಿರುವ ಅಪನಂಬಿಕೆ ಹೋಗಲಾಡಿಸಬೇಕೆಂದು ಒತ್ತಾಯಿಸಿದ್ರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments