Top Newsರಾಜಕೀಯರಾಜ್ಯ

ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ – ಜೆಡಿಎಸ್‌ ಲೇವಡಿ

ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮಾಪಣೆ ಕೇಳಿದ್ದಾರೆ.. ಇದೀಗ ಡಿಕೆಶಿ ಕ್ಷಮೆಯಾಚಿಸಿದ್ದಕ್ಕೆ ಜೆಡಿಎಸ್ ವ್ಯಂಗ್ಯವಾಡಿದೆ. ಉಚ್ಚಾಟನೆಯಿಂದ ಪಾರಾಗಲು ಡಿ.ಕೆ ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ ಅಂತ ಎಕ್ಸ್‌ನಲ್ಲಿ ಜೆಡಿಎಸ್‌ ಡಿಕೆ ಶಿವಕುಮಾರ್‌ ಕಾಲೆಳೆದಿದೆ..

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.

ST ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಟೀಕಿಸಿದೆ.

Comments (0)

Your email address will not be published. Required fields are marked *

Back to top button