Top Newsರಾಜಕೀಯರಾಜ್ಯ

ಅಕ್ರಮ ಹಣ ವರ್ಗಾವಣೆ ಕೇಸ್​; ವೀರೇಂದ್ರ ಪಪ್ಪಿ ಮತ್ತೆ 6 ದಿನ ED ಕಸ್ಟಡಿಗೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಗೇಮಿಂಗ್​ ಆಪ್​ಗಳಿಗೆ ಹಣ ಪೂರೈಕೆ ಆರೋಪದಲ್ಲಿ ಬಂಧನದಲ್ಲಿರುವ ಕಾಂಗ್ರೆಸ್​ ಶಾಸಕ ವೀರೇಂದ್ರ  ಪಪ್ಪಿ ಅವರನ್ನು ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟರ್ ಆದೇಶಿಸಿದೆ.

ವಿರೇಂದ್ರ ಪಪ್ಪಿ ಇಡಿ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಡಿ ಪರ ವಕೀಲ ಪ್ರಮೋದ್ ಚಂದ್ರ ವಾದ ಮಂಡಿಸಿದ್ರೆ, ಆರೋಪಿ ವಿರೇಂದ್ರ ಪಪ್ಪಿ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರು.

ವಾದ- ಪ್ರತಿವಾದಗಳನ್ನು ಆಲಿಸಿದ ಬಳಿಕ ಕಸ್ಟಡಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೇ 24 ಗಂಟೆಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಹಾಗೂ  ಶುದ್ಧವಾದ ಆಹಾರ, ಮೆಡಿಸಿನ್ ನೀಡಬೇಕು ಎಂದು ಕೋರ್ಟ್ ಹೇಳಿದೆ. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು, ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್‌ ಹೇಳಿದೆ.

Comments (0)

Your email address will not be published. Required fields are marked *

Back to top button