ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಆರ್ಎಸ್ಎಸ್ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್ ಸೋಶಿಯಲ್ ಮೀಡಿಯಾ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ.
ಜೆಡಿಎಸ್ ಸಾಮಾಜಿಕ ಜಾಲತಾಣ ನಿರ್ವಹಣ ಸಿಬ್ಬಂದಿ AICC ಯ ಲೆಟರ್ ಹೆಡ್ ನಕಲು ಮಾಡಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ವಕೀಲ ಧನಂಜಯ್ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣ ಸಿಬ್ಬಂದಿ ವಿರುದ್ಧ ಎಫ್. ಐ.ಆರ್. ದಾಖಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ..
ಇನ್ನು ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವ ವಿಚಾರದ ವೇಳೆ ಪ್ರತಿಕ್ರಿಯೆ ನೀಡುತ್ತಾ, ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ. ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ ಎಂದು ಡಿಸಿಎಂ ಹೇಳಿಕೆ ನೀಡಿದ್ರು. ಚಾಮುಂಡಿ ಬೆಟ್ಟ ಮತ್ತು ಚಾಮುಂಡೇಶ್ವರಿ ದೇವಿ ಎಲ್ಲ ಧರ್ಮದವರಿಗೂ ಸೇರಿದ್ದು, ಅದು ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಶಿವಕುಮಾರ್ ಹೇಳಿದ್ದು, ವಿರೋಧ ಪಕ್ಷದ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಇದಾದ ನಂತರ ಹೈಕಮಾಂಡ್ ವಾರ್ನಿಂಗ್ ಕೊಟ್ಟಿದ್ದು, ಡಿಕೆಶಿ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿದೆ.