ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ
ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ ಯಾಗಲಿದ್ದು, ಕರಾವಳಿಯ ಎರಡು ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಳಗಾವಿ, ಬಿದರ್, ಕಲಬುರಗಿ, ಕೊಡಗು, ಚಿಕ್ಕಮಗಳೂರು,
ಶಿವಮೊಗ್ಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ..