ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಂಸದ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಮತದಾರರ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಬಿಹಾರಕ್ಕೆ ತೆರಳಿದ್ದಾರೆ.
ಉತ್ತರ ಪ್ರದೇಶದ ಗೋರಖ್ಪುರ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಳಿದು ಬಿಹಾರದ ಗೋಪಾಲ್ಗಂಜ್ಗೆ ರಸ್ತೆ ಮಾರ್ಗವಾಗಿ ಪ್ರಯಾಣ ಬೆಳೆಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿದರು.
ಸಿಎಂ ಸಿದ್ದರಾಮಯ್ಯ ಅವರ ಜೊತೆ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಜಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ, ಡಾ. ಕೆ. ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ.