Top Newsರಾಜ್ಯವೆಬ್ ಸ್ಟೋರೀಸ್ಸಿನಿಮಾಸುದ್ದಿ

ವಿಜಯಲಕ್ಷ್ಮೀಯನ್ನ ನಿಂದಿಸಿ ಪೋಸ್ಟ್‌; 5 ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ FIR

ಬೆಂಗಳೂರು : ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಯನ್ನು ನಿಂದಿಸಿ, ಕೆಟ್ಟದಾಗಿ ಪೋಸ್ಟ್‌ ಮಾಡಲಾಗಿದ್ದು, ಈ ಸಂಬಂಧ ಐದು ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ..

ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು. ಈ ಸಂಬಂಧ ವ್ಯಕ್ತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

ದೂರಿನ ಆಧಾರದ ಮೇಲೆ ಮಹಿಳಾ ಆಯೋಗವು ಪೊಲೀಸ್ ಕಮೀಷನರ್‌ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರು ಪರಿಶೀಲನೆ ನಡೆಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಸದ್ಯ ಐದು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Comments (0)

Your email address will not be published. Required fields are marked *

Back to top button