ಬೆಂಗಳೂರು ಗ್ರಾಮಾಂತರ: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಐದು ಜನರು ಗಾಯಗೊಂಡಿರುವ ಘಟನೆಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ಮೂರ್ತಿ ಇದ್ದ ವಾಹನದಲ್ಲಿ ಪಟಾಕಿ ಇಟ್ಟಿದ್ದು, ವಾಹನದ ಶಾಕಕ್ಕೆ ಏಕಾಏಕಿ ಪಟಾಕಿ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.