ಬೆಂಗಳೂರು ಗ್ರಾಮಾಂತರ: ಮುತ್ತೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಹಿನ್ನೆಲೆ ಸಾರ್ವಜನಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಕೆ ನಿಷೇಧಿಸಿದ್ದು, ಒಂದು ವೇಳೆ ಪಟಾಕಿ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ಇನ್ನು ಘಟನೆ ಸಂಬಂಧ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 105, 125 (A)ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


