ಜಿಲ್ಲೆರಾಜಕೀಯರಾಜ್ಯವೆಬ್ ಸ್ಟೋರೀಸ್ಸುದ್ದಿ

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಸೂಕ್ತವಾಗಿದೆ-ಸಿದ್ದರಾಮಯ್ಯ

ಮೈಸೂರು: ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೇ ಹೇಳಿಕೆಗು ಇದಕ್ಕೂ ಏನು ಸಂಬಂಧ? ಬೆಜೆಪಿ ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಅಂತ ಅದನ್ನ ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದರು.

ಬೆರಳಣಿಕೆಯ ಮಂದಿಗೆ ಮಾತ್ರ ಬೂಕರ್ ಪ್ರಶಸ್ತಿ ಬಂದಿದೆ. ನಾನೇ ಅವರ ಹೆಸರನ್ನ ಆಯ್ಕೆ ಮಾಡಿದ್ದೇನೆ. ಉದ್ಘಾಟಕರು ದನ ತಿನ್ನುವುದನ್ನ ಬಿಜೆಪಿಯವರು ನೋಡಿದ್ದಾರಾ? ಅವರನ್ನ ವಿರೋಧಿಸಲೇಬೇಕೆಂದು ವಿರೋಧ ಮಾಡ್ತಿದ್ದಾರೆ. ದಸರಾ ಒಂದು ಸಾಂಸ್ಕೃತಿಕ ಹಬ್ಬ. ಇದು ಧರ್ಮಾತೀತವಾದ ಹಬ್ಬ. ಇದು ಎಲ್ಲಾ ಜಾತಿ, ಧರ್ಮಕ್ಕೆ ಸೇರಿದ್ದು. ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಟಿಪ್ಪು ಹೈದಾರಲಿ ಕೂಡ ದಸರಾ ನಡೆಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಕೂಡ ದಸರಾ ನಡೆಸಿದ್ದಾರೆ. ಇದಕ್ಕೆ ಧರ್ಮದ ಲೇಪನ ಬಳಿಯುವುದು ಸರಿಯಲ್ಲ ಎಂದು ಹೇಳಿದರು.

ಬೂಕರ್‌ ಪ್ರಶಸ್ತಿ ವಿಜೇತರು ನಮಲ್ಲಿ ಬಹಳ ಕಡಿಮೆ. ಬಹುಶಃ ಬಾನುಮುಷ್ತಾಕ್‌ ಎರಡನೇಯವರು. ಧರ್ಮಾಂಧರಿಗೆ ಇತಿಹಾಸ ಗೊತ್ತಿಲ್ಲ. ಅಂತಹವರು ಮಾತ್ರ ಟೀಕೆ ಮಾಡುತಾರೆ. ಮೊದಲು ಅವರು ಇತಿಹಾಸ ತಿಳಿದುಕೊಳ್ಳಲಿ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಿದ್ದಾರೆ. ಎಂದಿಗೂ ಜಾತ್ಯತೀತವಾಗಿ ಮಾತನಾಡುವುದಿಲ್ಲ ಎಂದರು.

Comments (0)

Your email address will not be published. Required fields are marked *

Back to top button