Top Newsಜಿಲ್ಲೆರಾಜಕೀಯರಾಜ್ಯವೆಬ್ ಸ್ಟೋರೀಸ್ಸುದ್ದಿ

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲು ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಗುಚ್ಚು ನೀಡುವ ಮೂಲಕ ಅತ್ಮೀಯವಾಗಿ ಬರಮಾಡಿಕೊಂಡರು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಬಂದಿಳಿದ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪುಷ್ಪಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ರಾಷ್ಟ್ರಪತಿಗಳು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರ್ಯಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಿ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ನಂತರ ಮಾನಸ ಗಂಗೋತ್ರಿಯಲ್ಲಿ ನಡೆಯುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಷ್ಟ್ರಪತಿಗಳ ಆಗಮಿಸಿದ ಹಿನ್ನಲೆಯಲ್ಲಿ ಅವರು ಸಂಚರಿಸುವ ಮಾರ್ಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button