Top Newsರಾಜ್ಯವೆಬ್ ಸ್ಟೋರೀಸ್ಸಿನಿಮಾಸುದ್ದಿ

ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ತಾಂತ್ರಿಕ ಕಾರಣ ನೀಡಿ ಹಾಕಿದ್ದ ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್​ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Comments (0)

Your email address will not be published. Required fields are marked *

Back to top button