ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರಕ್ಕೆ ಪತ್ರಕರ್ತೆಯೋರ್ವರ ಪ್ರಶ್ನೆಗೆ ಶಾಸಕ ದೇಶಪಾಂಡೆ ಅವರು ಉಢಾಫೆ ಉತ್ತರ ನೀಡಿರುವುದಕ್ಕೆ ಜೆಡಿಎಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ..
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಷಯವಾಗಿ ಪತ್ರಕರ್ತೆಯೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಜನರ ಪರಿಸ್ಥಿತಿ ಗಮನ ಹರಿಸಿ, ನಿಮ್ಮ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿಮ್ಮ ಅವಧಿಯಲ್ಲಿ ಆಗುತ್ತಾ ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಶಾಸಕ ಆರ್.ವಿ.ದೇಶಪಾಂಡೆ ‘ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ ಎಂದು ಅವಹೇಳನಕಾರಿ ಹೇಳಿಕೆ ನೀಡಿ, ಅಪಮಾನ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್ ದೇಶಪಾಂಡೆ ಅವರೇ ನಿಮ್ಮದು ಅದೆಂತಹ ಕೀಳು ಮನಸ್ಥಿತಿ ? ಜಿಲ್ಲೆಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಲ್ಪಿಸಿಕೊಡಿ ಅಂತ ಪ್ರಶ್ನೆಮಾಡಿದ ಹಿರಿಯ ಪತ್ರಕರ್ತೆಗೆ ನಿನ್ನ ಹೆರಿಗೆಯಾಗಲಿ ಎನ್ನುವುದು, ನೀವು ಸ್ತ್ರೀಯರಿಗೆ ಕೊಡುವ ಗೌರವವೇ ? ಹಿರಿಯ ಶಾಸಕರಾಗಿರುವ ದೇಶಪಾಂಡೆ ಅವರೇ, ನಿಮ್ಮ ಈ ಉದ್ಧಟತನ ಮಾತುಗಳು ಮಹಿಳೆಯರ ಕುಲಕ್ಕೆ ಮಾಡಿರುವ ಅಪಮಾನ. ಈ ಕೂಡಲೇ ಆ ಮಹಿಳಾ ಪತ್ರಕರ್ತೆಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದೆ.