ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಕಳೆದ ಕೆಲ ದಿನ ಗಳ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಏಕಾಏಕಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಕೆಡವಿದ ವಿಚಾರ ಸಾಹಸ ಸಿಂಹ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಭಿಮಾನ್ ಸ್ಟುಡಿಯೋದ ಲ್ಲಿನ 10 ಗುಂಟೆ ಜಾಗವನ್ನು ತಮಗೆ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದರು.
ಈ ಸಂಬಂಧ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ವಿಷ್ಣು ಅಳಿಯ ಅನಿರುದ್ ಜತ್ಕರ್ ಕೂಡ ಈ ಸಂದರ್ಭದಲ್ಲಿ ಇದ್ದರು. ಇದೇ ವೇಳೆ ಸಿಎಂ ಅವರಲ್ಲಿ ಜಾಗದ ವಿಚಾರವಾಗಿ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಭಾರತಿ ವಿಷ್ಣುವರ್ಧನ್, ಅಭಿಮಾನಿಗಳಿಗಾಗಿ ಸ್ಟುಡಿಯೋದಲ್ಲಿ ಜಾಗ ಕೊಡಿ ಎಂದು ಸಿಎಂ ಬಳಿ ಕೇಳಿದ್ದೇವೆ. ಅಭಿಮಾನಿಗಳ ಬಂದು ನಮಸ್ಕಾರ ಮಾಡಿ ಹೋಗಲು ಅವಕಾಶ ಮಾಡಿ ಕೊಡಬೇಕು ಎಂಬುದು ನಮ್ಮ ಮನವಿ ಎಂದಿದ್ದಾರೆ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಕೊಡಬೇಕು ಎಂಬುದು ಹಲವು ವರ್ಷಗಳ ಕೋರಿಕೆ. ಅಭಿಮಾನಿಗಳು ಈ ಬೇಡಿಕೆಯನ್ನು ಸರ್ಕಾರದ ಮಂದೆ ಇಡುತ್ತಲೇ ಬರುತ್ತಿದ್ದರು. ಈಗ ಅಭಿಮಾನಿಗಳ ಪರವಾಗಿ ಭಾರತಿ ಕೂಡ ಈ ರೀತಿಯ ಮನವಿ ಮಾಡಿದ್ದಾರೆ. ಕರ್ನಾಟಕ ರತ್ನ ಕೊಡಬೇಕು ಎಂದು ನಾನು ಕೇಳುವುದಿಲ್ಲ. ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಕೋರಿಕೆಯನ್ನು ಈಡೇರಿಸಬೇಕು’ ಎಂದು ಭಾರತಿ ಸಿಎಂ ಬಳಿ ಹೇಳಿದ್ದಾರೆ.
ಇನ್ನು ಮೈಸೂರು ನಗರದಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನಿರ್ಮಿಸಿ ಕನ್ನಡಿಗರ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ ಹೃತ್ತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇದು ಲಕ್ಷಾಂತರ ಅಭಿಮಾನಿಗಳಿಗೆ ಹೆಮ್ಮೆಯ ವಿಷಯವಾಗಿದೆ. ಆದರೆ, ಬೆಂಗಳೂರು ನಗರದಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ದೀರ್ಘಕಾಲದ ಬೇಡಿಕೆಯನ್ನು ನಿಮ್ಮ ಗಮನಕ್ಕೆ ತರಲು ಬಯ ಸುತ್ತೇವೆ. ಡಾ. ವಿಷ್ಣುವರ್ಧನ್ ಅವರು ಬದುಕನ್ನು ರೂಪಿಸಿಕೊಂಡಿದ್ದೇ ಬೆಂಗಳೂರಿನಲ್ಲಿ. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳ ವೂ ಆಗಿದೆ. ಏಕೆಂದರೆ, ಇಲ್ಲಿಯೇ ಡಾ. ವಿಷ್ಣುವರ್ಧನ್ ರವರ ಅಂತ್ಯಕ್ರಿಯೆ ನೇರವೇರಿದ್ದು. ಲಕ್ಷಾಂತರ ಅಭಿಮಾನಿಗಳು ಆಗಮಿಸಿ ತಮ್ಮ ಪ್ರೀತಿಯ ಕಲಾವಿದನಿಗೆ ಕಂಬನಿ ಮಿಡಿದಿದ್ದರು.