ಸ್ಯಾಂಡಲ್‌ವುಡ್‌ನ ನಟ ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್‌ನಲ್ಲಿ ಕಾಣಿಸಿಕೊಂಡು ಶಾಕಿಂಗ್ ನೀಡಿದ್ದಾರೆ.. ಡಾರ್ಲಿಂಗ್ ಕೃಷ್ಣ ಫ್ಯಾಮಿಲಿ ಕೋರ್ಟ್‌ಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಆದರೆ ಡಾರ್ಲಿಂಗ್ ಕೃಷ್ಣ ಭೇಟಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕೆಲವರು ಇದು ವೈಯಕ್ತಿಕ ವಿಷಯವಿರಬಹುದು ಎಂದು ಊಹಿಸುತ್ತಿದ್ದರೆ, ಇನ್ನೂ ಕೆಲವರು ಇದು ಚಿತ್ರೀಕರಣಕ್ಕೆ ಸಂಬಂಧಿಸಿದ್ದಾಗಿರಬಹುದೇ ಎಂದು ಚರ್ಚಿಸುತ್ತಿದ್ದಾರೆ. ಆದರೆ, ಕೃಷ್ಣನ ಈ ಕೋರ್ಟ್ ಭೇಟಿಯು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಇತ್ತೀಚೆಗೆ ಲವ್ ಮಾಕ್ಟೇಲ್ 3 ಚಿತ್ರದ ಶೂಟಿಂಗ್‌ನಲ್ಲಿ ತೊಡಗಿದ್ದಾರೆ. ಇದರ ಜೊತೆಗೆ, ಈ ಜೋಡಿ ಇತ್ತೀಚೆಗೆ ಅಂಡಮಾನ್‌ನಿಂದ ವಾಪಸ್ ಆಗಿದ್ದು, ತಮ್ಮ ಮಗಳ ಬರ್ತ್‌ಡೇ ಸಂಭ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ, ಕೃಷ್ಣನ ಕೋರ್ಟ್ ಭೇಟಿಯ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.