ಬೆಂಗಳೂರು:ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ನಡುವೆ ಮಾರಾಮಾರಿ ಆಗಿರುವ ಘಟನೆ ಜಿಗಣಿ ಬಿಎಂಟಿಸಿ ಡಿಪೋದಲ್ಲಿ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತನ್ನ ಕಾರಿಗೆ ಸೈಡ್ ಬಿಡಲಿಲ್ಲ ಅಂತ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿ, ಡ್ರೈವರ್ ಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.
ಬಸ್ ಚಾಲಕ ಸುನೀಲ್ ಮೇಲೆ ಪೊಲೀಸ್ ಸಿಬ್ಬಂದಿ ದರ್ಪ ತೋರಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಯನ್ನ ಬಂಧಿಸುವ ತನಕ ಬಸ್ ಓಡಿಸಲ್ಲ. ಕರ್ತವ್ಯಕ್ಕೆ ಹಾಜರಾಗಲ್ಲ ಎಂದು ಜಿಗಣಿ ಬಸ್ ಡಿಪೋ 27ರ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಇನ್ನು ಪೊಲೀಸ್ ಸಿಬ್ಬಂದಿ ಮತ್ತು ಚಾಲಕನ ನಡುವಿನ ಗಲಾಟೆಯ ದೃಶ್ಯವನ್ನು ವೀಡಿಯೋ ಮಾಡಿಕೊಳ್ಳಲಾಗಿದ್ದು. ಹಲ್ಲೆ ಖಂಡಿಸಿ ಡಿಪೋದಿಂದ ಬಸ್‌ಗಳನ್ನು ಹೊರ ತೆಗೆಯುವುದಿಲ್ಲ ಎಂದು ಬಿಎಂಟಿಸಿ ಚಾಲಕರು ಪ್ರತಿಭಟಿಸಿದ್ದಾರೆ.