ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಕೇಸ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದು, ಅವರು 5% ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ. ಇನ್ನೂ 50% ಆದಲ್ಲಿ ನಮ್ಮವರು ಬದುಕಲು ಆಗುತ್ತಾ? ನೀವು ಹೊರಗಡೆಯಿಂದ ಬಂದವರು.. ನಾವು ಇಲ್ಲೇ ಇರುವವರು.. ತೊಡೆ ತಟ್ಟೋ ಕೆಲಸ ಮಾಡಬೇಡಿ. ತೊಡೆ ಮುರಿತೀವಿ. ತಲೆನೂ ತೆಗಿತೀವಿ.. ನಮಗೆ ತೊಡೆ ಮುರಿಯೋದು ಗೊತ್ತು ಎಂದು ಸಿಟಿ ರವಿ ಭಾಷಣ ಮಾಡಿದ್ದರು..