Top Newsರಾಜಕೀಯರಾಜ್ಯಸುದ್ದಿ

ಯಾವುದೇ ಅನರ್ಹ ಬಿಪಿಎಲ್​​​ ಕಾರ್ಡ್​​ ರದ್ದು ಇಲ್ಲ- ಸಚಿವ ಮುನಿಯಪ್ಪ

ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್​​​​​ ಕಾರ್ಡ್​​​​ ಗಳನ್ನ ರದ್ದು ಮಾಡಿಲ್ಲ ಎಂದು ಸಚಿವ ಕೆ.ಹೆಚ್​ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ..

ಬೆಂಗಳೂರಿನಲ್ಲಿ ಅನರ್ಹ ರೇಷನ್​​​​​ ಕಾರ್ಡ್​​​​ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ. ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ. ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನೂ ರದ್ದು ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜೊತೆಗೆ ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಇನ್ನು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್​​ಗಳ ಲಿಸ್ಟ್ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರತ್ಯಕ್ಷವಾಗಿದೆ. ಲಿಸ್ಟ್​ನಲ್ಲಿ ಇರುವವರಿಗೆ ಮೂರು ದಿನಗಳವರೆಗೆ ಪಡಿತರ ವಿತರಣೆಯನ್ನು ತಡೆಹಿಡಿಯಲು ಮೌಖಿಕ ಆದೇಶ ಹೊರಡಿಸಲಾಗಿದೆ.

Comments (0)

Your email address will not be published. Required fields are marked *

Back to top button