Top Newsರಾಜಕೀಯರಾಜ್ಯಸುದ್ದಿ

ಬಿಪಿಎಲ್ ಕಾರ್ಡ್‌ನಲ್ಲಿ ಅನರ್ಹರು ಇದ್ದರೆ ತೆಗೆಯಲು ಸೂಚನೆ- ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿ ಅನರ್ಹ ಬಿ.ಪಿ.ಎಲ್ ಕಾರ್ಡದಾರರು ಹೆಚ್ಚಿದ್ದಾರೆ. ಹೀಗಾಗಿ ಅನರ್ಹರನ್ನ ಪತ್ತೆ ಹಚ್ಚಿ ತೆಗೆದು ಹಾಕಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕಲಬುರಗಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ..

ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ಅಕ್ರಮವಾಗಿ ಸಾಗುಸುತ್ತಿರುವ ವಿಚಾರವಾಗಿ ಮಾತಾಡಿದ ಸಿದ್ದರಾಮಯ್ಯ ಅವರು, ಇದೇ ಕಾರಣಕ್ಕಾಗಿಯೇ ಈ ಪ್ರಕರಣವನ್ನ ತನಿಖೆಗೆ ವಹಿಸಲಾಗಿದೆ. ಸಿಐಡಿ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅತಿವೃಷ್ಟಿ ಹಾನಿ ಪರಿಹಾರ ಹೆಚ್ಚಳಕ್ಕೆ NDRF ನಿಯಮ ಬದಲಾಯಿಸುವಂತೆ ಕೇಂದ್ರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇವೆ. ಇದೇ ವಿಚಾರಕ್ಕಾಗಿ ಪ್ರಧಾನಿಗಳನ್ನು ಭೇಟಿ ಮಾಡಿದ್ದೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಆದ್ರೆ ಕೇಂದ್ರ ಸರಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ರು.

Comments (0)

Your email address will not be published. Required fields are marked *

Back to top button