Top Newsಸಿನಿಮಾಸುದ್ದಿ

ಕಿಚ್ಚ ಸುದೀಪ್ ವಿರುದ್ಧ ವೈಯಕ್ತಿಕ ನಿಂದನೆ -ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ನಟ ಸುದೀಪ್​​​​​ ಅವರನ್ನು ಟ್ರೋಲ್​​​ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​​​​​​​​ ಸೇನಾ ಸಮಿತಿಯಿಂದ ದೂರು ನೀಡಲಾಗಿದೆ..

ಟ್ವಿಟ್ಟರ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ಅವರಿಗೆ ವಿಕೃತವಾದ, ವೈಯಕ್ತಿಕ ನಿಂದನೆ ಮಾಡುವವರ ವಿರುದ್ಧ ದೂರು ನೀಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಸೆಲೆಬ್ರಿಟಿಗಳು ಸಾಮಾನ್ಯವಾಗಿ ಟ್ರೋಲ್​ಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಮ್ಮೆ ಪರಿಸ್ಥಿತಿ ಕೈ ಮೀರಿದಾಗ ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ಸುದೀಪ್ ಅಭಿಮಾನಿಗಳು ಈ ರೀತಿಯ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button