Top Newsರಾಜಕೀಯರಾಜ್ಯಸುದ್ದಿ

ಬಾನು ಮುಷ್ತಾಕ್ ಮೈಸೂರು ದಸರಾ​ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂ ಆದೇಶ

ಬೆಂಗಳೂರು: ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್​ ಪ್ರಶಸ್ತಿ ಬಾನು ಮುಷ್ತಾಕ್ ಅವರ​ ಆಹ್ವಾನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​​ ವಜಾಗೊಳಿಸಿ ಆದೇಶ ಹೊರಡಿಸಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್‌ ಸಿಂಹ ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸೇರಿದಂತೆ ಅನೇಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಅನುಮೋದಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

Comments (0)

Your email address will not be published. Required fields are marked *

Back to top button