
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಇಂದು ಸಿಸಿಹೆಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ..
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದ್ದು, A1 ಆರೋಪಿ ಪವಿತ್ರಾಗೌಡ ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.
ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ.




