Thursday, November 20, 2025
27.5 C
Bengaluru
Google search engine
LIVE
ಮನೆರಾಜಕೀಯS. L ಭೈರಪ್ಪನವರ ಸ್ಮಾರಕ ನಿರ್ಮಾಣ: CM ಸಿದ್ದರಾಮಯ್ಯ ಘೋಷಣೆ

S. L ಭೈರಪ್ಪನವರ ಸ್ಮಾರಕ ನಿರ್ಮಾಣ: CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಿಎಂ ಸದ್ದರಾಮಯ್ಯ ಕನ್ನಡದ ಹಿರಿಯ ಸಾಹಿತಿ,ಕಾದಂಬರಿಕಾರ ಎಸ್​ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಪಾರ ಓದುಗರನ್ನ ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಿದ್ದರಾಮಯ್ಯ ಹೇಳಿದರು.

ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments