ಮಳೆಸುದ್ದಿ

ಬಾಗಲಕೋಟೆಯಲ್ಲಿ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕ ಸಾವು

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವ ಘಟನೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ.. 11 ವರ್ಷದ ದರ್ಶನ್​ ನಾಗಪ್ಪ ಲಾತೂರ ಮೃತ ಬಾಲಕ..

ಮೃತ ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಅವಘಡ ಸಂಭವಿಸಿದೆ. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದ್ದಿದ್ದು, ಬಾಲಕ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ರೂಪಾ, ಸಹೋದರಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಟ್ಟಣದ ಠಾಣಾಧಿಕಾರಿ ಕಿರಣ ಸತ್ತಿಗೇರಿ ಭೇಟಿ ನೀಡಿ ಪರಿಶೀಲಿಸಿದರು.

Comments (0)

Your email address will not be published. Required fields are marked *

Back to top button